ಮಾಜಿ ಸಿ.ಎಂ ಎಸ್ .ಎಂ .ಕೃಷ್ಣ ನಿಧನದಿಂದಾಗ ರಾಜ್ಯದಲ್ಲಿ 3 ದಿನ ಶೋಕಾಚರಣೆ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಬುಧವಾರ 11-12-2024 ರಂದು ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತಾಡಿದೆ ಅವರು ಮಂಗಳವಾರ ಮಧ್ಯರಾತ್ರಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ವಿಧಿವಶರಾಗಿದ್ದು ತೀವ ನೋವನ್ನುಂಟು ಮಾಡಿದೆ ಎಂದರು. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದರು. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದ್ದು ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11-12-2024ರಂದು ಬುಧವಾರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಮತ್ತು ದಿನಾಂಕ: 10-12-2024 ರಿಂದ 12-12-2024 ರವರೆಗೆ ಮೂರು ದಿನಗಳ ಕಾಲ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಡೆಸದಂತೆ, ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅವರ ನಿಧನಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್ಕೆ ಪಾಟೀಲ ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.
© ASK News Kannada. All Rights Reserved. Designed by AGScurate IT Solutions LLP