ಗದಗ, ಡಿ.13 : ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರಗೆ ಡಿಕ್ಕಿ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಾಂಕ 13-12-2024 ರಂದು ಶುಕ್ರವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಗಾವತಿ ಮೂಲದ ಶಂಕರ್ ಎಂಬಾತನು ಚಾಲನೆ ಮಾಡುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಚಾಲಕ ಗಂಗಾವತಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಎನ್ನಲಾಗಿದ್ದು ಈ ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಪಲ್ಟಿಯಾಗಿದ್ದ ಕಾರನ್ನ ಸ್ಥಳಾಂತರಿಸಿ ರಸ್ತೆ ಸಂಚಾರ ಸುಗಮಗೊಳಿಸಿದ್ದು ತಿಳಿದು ಬಂದಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ ಎನ್ನಲಾಗುತ್ತಿದೆ.
© ASK News Kannada. All Rights Reserved. Designed by AGScurate IT Solutions LLP