ask-banner
ad-banner
ರಾಜ್ಯ 2025-06-05

ಶೇರ್ ಮಾಡಿ  

*RCB ವಿಜಯೋತ್ಸವ ಕಾಲ್ತುಳಿತ ಘಟನೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ...* *ಆರ್ ಸಿ ಬಿ ಸಂಸ್ಥೆಯ ಕಾರ್ಯಕ್ರಮ ಆಯೋಜಕ ಡಿಎನ್ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳ ಬಂಧನಕ್ಕೆ ಸೂಚನೆ...* *ಪೋಲೀಸ್ ಕಮಿಷನರ್ ಸೇರಿ ಕಬ್ಬನ ಪಾರ್ಕ ಪೋಲೀಸ್ ಹಿರಿ ಕಿರಿಯ ಅಧಿಕಾರಿಗಳು, ಸಿಬ್ಬಂದಿ ಅಮಾನತ್...!* *ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ...* *ಸಿಎಂ ಸಿದ್ರಾಮಯ್ಯ..*

ಬೆಂಗಳೂರು, ಜೂ. 5 : RCB ವಿಜಯೋತ್ಸವ ಕಾಲ್ತುಳಿತ ಘಟನೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚಿಸಿರುವ ಜೊತೆಗೆ ಆರ್ ಸಿ ಬಿ ಸಂಸ್ಥೆಯ ಕಾರ್ಯಕ್ರಮ ಆಯೋಜಕ ಡಿಎನ್ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳ ಬಂಧನಕ್ಕೆ ಸೂಚಿಸಲಾಗಿದ್ದು, ಪೋಲೀಸ್ ಕಮಿಷನರ್ ಸೇರಿ ಕಬ್ಬನ ಪಾರ್ಕ ಪೋಲೀಸ್ ಹಿರಿ ಕಿರಿಯ ಅಧಿಕಾರಿಗಳು, ಸಿಬ್ಬಂದಿ ಅಮಾನತ್ ಮಾಡಲು ಆದೇಶಲಾಗಿದ್ದು ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವದೆಂದು ಸಿಎಂ ಸಿದ್ರಾಮಯ್ಯ ಹೇಳಿದರು. ಅವರು ಗುರುವಾರ ವಿಧಾನ ಸೌದದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇಲಿನಂತೆ ಹೇಳಿದರು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ ನಂತರ ಪ್ರಾಥಮಿಕ ಹಂತದ ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡು ಬಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಣಯಿಸಲಾಗಿದೆ ಎಂದರು. ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಸಲ್ಲಿಸಲಾಗುವದೆಂದರು. ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದ್ದು ಬುಧವಾರ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದರು. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ ಎಂದರು. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯಲ್ಲಿ ಡಿಸಿಎಂ ಡಿಕೆಶಿ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. · ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡು ಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. · ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ ಎಂದರು. · ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದರು. ಬುಧವಾರ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾ ದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Anant S. Karkal
ವೀಕ್ಷಣೆ 225

ಜನಪ್ರಿಯ ಸುದ್ದಿಗಳು

ಕಚೇರಿ ವಿಳಾಸ

Gadag - 582101

ಫೋನ್ ನಂ.

+91 9448302002

ಇಮೇಲ್ ಐಡಿ

asknewskannada@gmail.com

ಸೋಶಿಯಲ್ ಮೀಡಿಯಾ ಲಿಂಕ್ಸ್

© ASK News Kannada. All Rights Reserved. Designed by AGScurate IT Solutions LLP