ask-banner
ad-banner
ರಾಜ್ಯ 2025-06-21

ಶೇರ್ ಮಾಡಿ  

*ವಿಶ್ವಕ್ಕೆ ಭಾರತದ ಅದ್ಭುತ ಕೊಡುಗೆ ಯೋಗ...* *ಆರೋಗ್ಯವಂತ ಬದುಕಿಗೆ ಯೋಗ ಬೇಕೆ ಬೇಕು..ಜಿಲ್ಲಾ ನ್ಯಾಯಾದೀಶೆ ಶ್ರೀಮತಿ ನಾಗವೇಣಿ ಅಭಿಮತ..*

ಗದಗ, ಜು.21 : ವಿಶ್ವಕ್ಕೆ ಯೋಗದ ಮಹತ್ವತೆಯನ್ನು ತಿಳಿಸಿಕೊಟ್ಟಿದ್ದು ಭಾರತ ದೇಶ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದ್ಯಕ್ಷರಾದ ಶ್ರೀಮತಿ ನಾಗವೇಣಿಯವರು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಯೋಗ ರಾಮಬಾಣವಾಗಿದೆ ಎಂದರು. ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಯುಷ್ಯ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಹಣವಿಲ್ಲದೆ ರೋಗ ಗುಣಪಡಿಸುವ ಶಕ್ತಿ ಯೋಗಕ್ಕಿದೆ, ಯೋಗ ಮಾಡುವುದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆಯಲ್ಲದೆ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಲು ಯೋಗ ಸಹಕಾರಿಯಾಗಿದೆ ಎಂದರು. ಕೆಲಸದ ಮಧ್ಯದಲ್ಲಿಯೂ ಕೂಡಾ ಪ್ರತಿದಿನ ಯೋಗ ಪ್ರಾಣಾಯಾಮ ಮಾಡುವುದರಿಂದ ಮನುಷ್ಯ ಮತ್ತು ಮನಸ್ಸು ಲವಲವಿಕೆಯಿಂದ, ಉಲ್ಲಾಸದಿಂದ ಇರಲು ಸಾದ್ಯವಾಗುತ್ತಿದ್ದು ಒಂದು ಭೂಮಿ ಒಂದು ಆರೋಗ್ಯ ಈ ವರ್ಷದ ಯೋಗ ಘೋಷ ವಾಕ್ಯವಾಗಿದ್ದು, ಆರೋಗ್ಯದ ಕಡೆಗೆ ಎಲ್ಲರೂ ಗಮನಹರಿಸಬೇಕಲ್ಲದೆ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದ್ಯಕ್ಷರಾದ ಶ್ರೀಮತಿ ನಾಗವೇಣಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ವಕೀಲರ ಸಂಘದ ಅದ್ಯಕ್ಷರಾದ ಆರ್.ಜಿ.ಕಲ್ಲೂರ ವಹಿಸಿದ್ದರು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಸಿ.ಎಮ್ ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಜಿ.ಆರ್.ಶೆಟ್ಟರ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ, 1ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀಮತಿ ಶಿಲ್ಪಾ ತಿಮ್ಮಾಪೂರ, 2ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ ಹಾಗೂ ಗದಗ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಮ್.ಎ.ನಾಯ್ಕರ, ಉಪಾಧ್ಯಕ್ಷರಾದ ಎಮ್.ಎ.ಸಂಗನಾಳ, ವಕೀಲರ ಸಂಘದ ಸದಸ್ಯರುಗಳು, ಕಾನೂನು ನೆರವು ಅಭಿರಕ್ಷಕ ವಕೀಲರು, ಪ್ಯಾನಲ್ ವಕೀಲರು, ಪಿ.ಎಲ್.ವಿ ಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ , ವಕೀಲರ ಸಂಘದ ಸದಸ್ಯರುಗಳು, ಕಾನೂನು ನೆರವು ಅಭಿರಕ್ಷಕ ವಕೀಲರು ಪಾಲ್ಗೊಂಡಿದ್ದರು. ಯೋಗ ಕಾರ್ಯಕ್ರಮವನ್ನು ಶ್ರೀಮತಿ ಶಶಿಕಲಾ ಜೋಗರಡ್ಡಿ ನಿರೂಪಿಸಿದರು.

Anant S. Karkal
ವೀಕ್ಷಣೆ 586

ಜನಪ್ರಿಯ ಸುದ್ದಿಗಳು

ಕಚೇರಿ ವಿಳಾಸ

Gadag - 582101

ಫೋನ್ ನಂ.

+91 9448302002

ಇಮೇಲ್ ಐಡಿ

asknewskannada@gmail.com

ಸೋಶಿಯಲ್ ಮೀಡಿಯಾ ಲಿಂಕ್ಸ್

© ASK News Kannada. All Rights Reserved. Designed by AGScurate IT Solutions LLP