ಗದಗ,ಜ.24 : ನೌಕರರ ಬಳಗ ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದರಿಂದಲೇ ಕಿರಿಯ ವಯಸ್ಸಿನಲ್ಲಿ ನಾನು ಕರ್ನಾಟಕ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷನಾಗಿ ನೇಮಕಗೊಳ್ಳಲು ಕಾರಣವಾಗಿದೆ ಎಂದ ಎಂದು ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ನೌಕರರ ಸಂಘದ ಉಪಾಧ್ಯಕ್ಷ ಡಾ.ಬಸವರಾಜ ಬಳ್ಳಾರಿ ಸದಾ ನೌಕರರ ಹಿತರಕ್ಷಣೆಯೇ ನನ್ನ ಮೂಲ ಮಂತ್ರವಾಗಿದೆ ಎಂದರು. ಅವರು ಕರ್ನಾಟಕ ರಾಜ್ಯ ನೌಕರರ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ನಾಮನಿರ್ದೇಶನಗೊಂಡ ಪ್ರಮಾಣ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರಿಂದ ಸ್ವೀಕರಿಸಿದ ನಂತರ ಮಾತನಾಡಿ ನನ್ನ ಮೇಲೆ ನಂಬಿಕೆಯಿಟ್ಟು ವಹಿಸಿಕೊಟ್ಟ ಸಂಘದ ಜವಾಬ್ದಾರಿಯನ್ನು ಯಾವುದೇ ಚ್ಯುತಿ ಬರದಂತೆ ನಿರ್ವಹಿಸುತ್ತೇನೆಂದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷನಾಗಿ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷನಾಗಿ ನೌಕರರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ರಾಜ್ಯಾಧ್ಯಕ್ಷ ಸಿಎಸ್.ಷಡಾಕ್ಷರಿ ಸೇರಿದಂತೆ ರಾಜ್ಯ ಘಟಕದ ಎಲ್ಲ ಹಿರಿ ಕಿರಿಯ ಪದಾಧಿಕಾರಿಗಳಿಗೆ, ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳಿಗೆ, ನೌಕರರ ಬಂಧುಗಳಿಗೆ ಅಭಿನಂದಿಸಿದ ಡಾ.ಬಸವರಾಜ ಬಳ್ಳಾರಿ ನೌಕರರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂಧಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ರಾಜ್ಯ ಘಟಕದ ಗೌರವ ಅಧ್ಯಕ್ಷರು, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
© ASK News Kannada. All Rights Reserved. Designed by AGScurate IT Solutions LLP