ask-banner
ad-banner
ರಾಜ್ಯ 2026-02-16

ಶೇರ್ ಮಾಡಿ  

*ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕ, ಪ್ರಾಮಾಣಿಕವಾಗಿ ಬಳಕೆ ಮಾಡಿ : ಸಚಿವ ಎಚ್ಕೆ.ಪಾಟೀಲ ಕಡಕ್ ಸೂಚನೆ*

ಗದಗ, ಫೆ.16 : ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ, ಪ್ರಾಮಾಣಿಕವಾಗಿ ಬಳಕೆ ಮಾಡುವ ಜೊತೆಗೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದರಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ, ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಕಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಸೋಮವಾರ ಜರುಗಿದ ಮುಖ್ಯಂಮತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕೆಂದರು. ನಗರೋತ್ಥಾನದಡಿ ಬಿಡುಗಡೆಯಾದ ಅನುದಾನದಲ್ಲಿ ಕೈಗೊಳ್ಳಲಾಗುವ ರಸ್ತೆ, ಚರಂಡಿ ಮುಂತಾದ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ತಿಳಿ ಹೇಳಿದರು. ಗದಗ ವಿಧಾನ ಸಭಾ ಮತ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಅಪೂರ್ಣವಾದಂತಹ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವ ಎಚ್.ಕೆ.ಪಾಟೀಲರು ಸೂಚಿಸಿದರು. ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ‌ ಸಂತೋಷಕುಮಾರ, ಅಪರ‌ ಜಿಲ್ಲಾಧಿಕಾರಿ ಡಾ.ದುರಗೇಶ್.ಕೆ.ಆರ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ಶಾಲಾ‌ ಶಿಕ್ಷಣ‌ ಇಲಾಖೆ ಉಪನಿರ್ದೆಶಕರಾದ ಆರ್.ಎಸ್‌.ಬುರುಡಿ, ನಿರ್ಮಿತ ಕೇಂದ್ರ ಯೋಜನಾ ನಿರ್ದೆಶಕ ಗಂಗಾಧರ್ ಶಿರೋಳ, ಕ್ರೀಡಾ ಇಲಾಖೆ ಸಹಾಯಕ‌ ನಿರ್ದೇಶಕರಾದ ಶರಣು ಗೊಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ನಂದಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಬಸವರಾಜ ಕೊಟೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Anant S. Karkal
ವೀಕ್ಷಣೆ 115

ಜನಪ್ರಿಯ ಸುದ್ದಿಗಳು

ಕಚೇರಿ ವಿಳಾಸ

Gadag - 582101

ಫೋನ್ ನಂ.

+91 9448302002

ಇಮೇಲ್ ಐಡಿ

asknewskannada@gmail.com

ಸೋಶಿಯಲ್ ಮೀಡಿಯಾ ಲಿಂಕ್ಸ್

© ASK News Kannada. All Rights Reserved. Designed by AGScurate IT Solutions LLP