ಗದಗ : ಯಾವುದೇ ಒಬ್ಬ ವ್ಯಕ್ತಿಯು ತನ್ನ ವೃತ್ತಿಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲಿ ಆಸಕ್ತಿಯನ್ನು ವಹಿಸಿ ವೃತ್ತಿಯ ಗೌರವದೊಂದಿಗೆ ಸಾಮಾಜಿಕ ಕಾರ್ಯಗಳನ್ನು ಮಾಡುವುದರೊಂದಿಗೆ ಜನರ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ ಅಂತಹ ವ್ಯಕ್ತಿಗಳಿಗೆ ಪ್ರಶಸ್ತಿ ಹಾಗೂ ಗೌರವಗಳು ಅರಸಿ ಬರುತ್ತಿರುವುದ ಸಹಜ ಇಂತಹ ವ್ಯಕ್ತಿಗಳಲ್ಲಿ ನಗರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಪರಶುರಾಮ ಷಣ್ಮುಖಪ್ಪ ನೀಲಗುಂದ ಅವರಿಗೆ ಗೌರವ ಡಾಕ್ಟರೇಟ್ ಅರಸಿ ಬಂದಿದ್ದು ಹೆಮ್ಮೆಯ ಸಂಗತಿ. ಪರಶುರಾಮ ನೀಲಗುಂದ ಅವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಇಂಟರ್ನ್ಯಾಷನಲ್ ಅಕ್ರೆಡಿಟೇಶನ್ ಸಂಸ್ಥೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ಅವರ ಸಾಮಾಜಿಕ ಕಾರ್ಯಕ್ಕೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ದಿನಾಂಕ ಪೆ, ೨೮ ರಂದು ಬೆಂಗಳೂರು (ಹೊಸೂರು) ಪ್ರಧಾನ ಮಾಡಿ ಗೌರವಿಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಪೋಕ್ಸೋ ಮತ್ತು ಬಾಲ್ಯ ವಿವಾಹ ಕುರಿತಂತೆ ಇಲಾಖೆಯೊಂದಿಗೆ ಕೈಜೋಡಿಸಿ ಅರಿವು ಮೂಡಿಸುವುದರೊಂದಿಗೆ ಸಾಮಾಜಿಕ ಕಾರ್ಯವನ್ನು ಮಾಡುತ್ತಿದ್ದಾರೆ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಆಯ್ಕೆಯಾದ ಅವರಿಗೆ ಸಾಮಾಜಿಕ ಕಾರ್ಯಕರ್ತರು ಹಾಗೂ ವಕೀಲರ ಸಂಘದ ಹಿರಿಯರು ಹಿತೈಷಿಗಳು ಶುಭ ಹಾರೈಸಿದ್ದಾರೆ
© ASK News Kannada. All Rights Reserved. Designed by AGScurate IT Solutions LLP